ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ -ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ
ಸಹೃದಯರಿಗೆ ನನ್ನ ನಮಸ್ಕಾರಗಳು.
ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಪರಮಶಿಷ್ಯ ರಾದ ಪೂಜ್ಯ ಲಿಂ. ಪಂಚಾಕ್ಷರಿ ಗವಾಯಿಗಳ ಪುಣ್ಯ ತಿಥಿ ಮತ್ತು ವಿಶ್ವ ಸಂಗೀತ ದಿನಾಚರಣೆಯ ಅಂಗವಾಗಿ “ಸುಕುಮಾರ” ಸಂಗೀತ ವಿಶೇಷ ಸಂಚಿಕೆಯನ್ನು ಪ್ರಕಟಿಸಲು ಹೆಮ್ಮೆಯೆನಿಸುತ್ತದೆ.
ಗಾನಯೋಗಿ ಪಂಚಾಕ್ಷರಿ ಗವಾಯಿಗಳನ್ನು ಬಾಲ್ಯದಿಂದ ಹಿಡಿದು ಸ್ವತಂತ್ರವಾಗಿ ಬದುಕುವವರೆಗೂ ಕೈ ಹಿಡಿದು ನಡೆಸಿ ಸಂಗೀತ ಲೋಕಕ್ಕೆ ಅವರನ್ನು ಅರ್ಪಣೆ ಮಾಡಿದವರು ಶ್ರೀ ಕುಮಾರ ಶಿವಯೋಗಿಗಳು. ಸಂಗೀತ ಸಾಮ್ರಾಜ್ಯಕ್ಕೆ ಇದು ಶ್ರೀಕುಮಾರ ಶಿವಯೋಗಿಗಳ ಮೇರು ಕೊಡುಗೆ. ಅಂಧರನ್ನು ಸಂಗೀತ ಸಾಮ್ರಾಜ್ಯದ ರಸ ಋಷಿಗಳನ್ನಾಗಿ ಮಾಡಿ ವಿಶ್ವವೇ ಕಣ್ಣು ತೆರೆದು ನೋಡಿ, ಕಿವಿ ತುಂಬ ಕೇಳಿ ,ಬಾಯಿ ತುಂಬ ಹೊಗಳುವಂತೆ ಮಾಡಿದ ಕೀರ್ತಿ ಶ್ರೀ ಕುಮಾರ ಶಿವಯೋಗಿಗಳಿಗೆ ಸಲ್ಲುತ್ತದೆ. ಪಂಚಾಕ್ಷರಿ ಗವಾಯಿಗಳವರು ಗದುಗಿನ ವೀರೇಶ್ವರಪುಣ್ಯಾಶ್ರಮವನ್ನು ಸ್ಥಾಪಿಸಿ ,ಆಶ್ರಮದ ಜವಾಬ್ದಾರಿಯನ್ನು ತಮ್ಮ ಸಮರ್ಥ ಶಿಷ್ಯ ಪುಟ್ಟರಾಜರಿಗೆ ವಹಿಸಿಕೊಟ್ಟರು. ಬಡವ ಬಲ್ಲಿದ,ಮೇಲು ಕೀಳು,ಆ ಜಾತಿ ಈ ಜಾತಿ ಎಂಬ ಭೇಧಗಳಿಲ್ಲದೇ ಇಂದು ಗದುಗಿನ ವೀರೇಶ್ವರಪುಣ್ಯಾಶ್ರಮ ಸಮಾಜಕ್ಕೆ ಅದ್ಭುತ ಸೇವೆಯನ್ನು ಸಲ್ಲಿಸುತ್ತಿದೆ.
ಈ ಪಾವನ ಸಮಯದಲ್ಲಿ ನವದೆಹಲಿಯ ಹಾನಗಲ್ಲ ಶ್ರಿ ಕುಮಾರ ಶಿವಯೋಗಿ ಸೇವಾ ಸಮಿತಿ ಅರ್ಪಿಸಿದ ಕವಿರತ್ನ ಚನ್ನಕವಿಗಳು ವಿರಚಿತ ಶ್ರೀಕುಮಾರೇಶ್ವರ ನಾಮಾವಳಿ ಸಂಗೀತ ಧ್ವನಿ ಸುರಳಿಯನ್ನು ಹಂಪಿಹೇಮಕೂಟ ಶೂನ್ಯಸಿಂಹಾಸನಾಧೀಶ್ವರ ಪೂಜ್ಯಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರು ಅಧ್ಯಕ್ಷರು, ಶ್ರೀ ಮದ್ವೀರಶೈವ ಶಿವಯೊಗ ಮಂದಿರ ಸಂಸ್ಥೆ, ಶಿವಯೋಗ ಮಂದಿರ. ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ-ಬಳ್ಳಾರಿ-ಹಾಲಕೆರೆ ಅವರ ಅಮೃತಹಸ್ತ ದಿಂದ ಶ್ರೀ ಶಿವಯೋಗಮಂದಿರದಲ್ಲಿ ಲೋಕಾರ್ಪಣೆ ಗೊಂಡಿದ್ದು ವಿಶೇಷ ವಾಗಿತ್ತು.

ಈ ವಿಶೇಷಾಂಕದ ಲೇಖನ ಮತ್ತು ಲೇಖಕರ ವಿವರಗಳ ಜೊತೆಗೆ ಲೇಖಕರಿಗೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
- ಕಾವ್ಯ ಚಿತ್ತದ ರಾಗ ರಚನೆ : ಲಿಂ. ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
- ಧಾರವಾಹಿ : ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ..
- ಸಂಗೀತ ಕ್ಷೇತ್ರಕ್ಕೆ ಶಿವಯೋಗಮಂದಿರದ ಕೊಡುಗೆಗಳು : ಆಕರ ಗ್ರಂಥ : ಶಿವಯೋಗಮಂದಿರ ಶತ ಸಂವತ್ಸರ ಸಂಪಾದಕರು ಡಾ. ಮೃತ್ಯುಂಜಯ ರುಮಾಲೆ
- ಪರಮ ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶ್ರೀಗಳವರ ಸಂಗೀತ ಸಂಪ್ರೀತಿ. ಲೇಖಕರು :ಲಿಂ. – ಪಂ. ಪುಟ್ಟರಾಜ ಗವಾಯಿಗಳು
- ಪುಣ್ಯಸ್ಮರಣೆ ಪೂಜ್ಯ ಪಂಚಾಕ್ಷರಿ ಗವಾಯಿಗಳು .ಲೇಖಕರು ಶ್ರೀ ಶಿರೀಷ ಜೋಶಿ ಸೌಜನ್ಯ: ಸುಕುಮಾರ ದೀಪ್ತಿ .ಸಂಪಾದಕರು ಪೂಜ್ಯ ಶ್ರೀ ಅಭಿನವ ಸಿದ್ಧಾರೂಡ ಸ್ವಾಮಿಗಳು ಹುಬ್ಬಳ್ಳಿ
- ಕಲಾಯೋಗಿ ಲೇಖಕರು : – ಶ್ರೀ ಗಂಗಾಧರ ಶಾಸ್ತ್ರಿಗಳು, ಚಿತ್ತರಗಿ.
- ನಾದ-ಲೇಖಕರು : ಶ್ರೀ ರಾಮೇಶ್ವರ ಬಿಜ್ಜರಗಿ ಸೊಲ್ಲಾಪುರ
- Guru – Supriya Antin Kaddargi Vice President, JP Morgan Chase Bank Greater Chicago.USA
- ಸಂಗೀತವೆಂಬ ಜೀವನ ಚೈತನ್ಯ ಲೇಖಕರು : ಗುರು ಹಿರೇಮಠ, ಹಗರಿಬೊಮ್ಮನಹಳ್ಳಿ
- ನೆನಪು : ಶಿವಯೋಗಮಂದಿರದ ತೆಂಗಿನ ಗಿಡಗಳು ಮತ್ತು ಲಿಂ. ಪೈಲವಾನ ವೀರಭದ್ರಪ್ಪನವರು ಮೂಲ ಲೇಖಕರು ಶ್ರೀ ಕಿಶನ್.ಕುಲಕರಣಿ ಕುಷ್ಟಗಿ ಸಂಗ್ರಹ : ಶ್ರೀ ಕುಮಾರ ಹಿರೇಮಠ ಮತ್ತು ಶ್ರೀ ರವಿ ಹುಲಕೋಟೆ
- ಸಂಗೀತ ಸಂಚಿಕೆಗೆ ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು ವಿರಚಿತ ಕಾವ್ಯಗಳನ್ನು ಸುಶ್ರಾವ್ಯ ವಾಗಿ ಹಾಡಿದ ತುಮಕೂರಿನ ಶ್ರೀ ಸಿದ್ದೇಂದ್ರಕುಮಾರ ಹಿರೇಮಠ ಅವರಿಗೆ ಕೃತಜ್ಞತೆಗಳು
ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯ ಮುಪ್ಪಿನ ಬಸವಲಿಂಗ ದೇವರು ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠ ಹಾಲಕೆರೆ ಹಾಗು ಪೂಜ್ಯ ಪರ್ವತ ದೇವರು ಅವರಿಗೆ ತುಂಬು ಹೃದಯದ ಕೃತಜ್ಞತೆಗಳು.
-ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ -ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ