ಕಾವ್ಯ “ ಮಾನವಾ ! ನೀನಾರೋ ? ಕಾಯ||” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು

ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರಶಿವಯೋಗಿಗಳು ರಚಿಸಿದ ಪದ್ಯ

(ರಾಗ-ದರ್ಬಾರಿ ಕಾನಡಾ)

ಮಾನವಾ ! ನೀನಾರೋ ? ಕಾಯ

ಮನ ಮರುತ ನಿನಗಿವೇನೋ ? || ಪ ||

ಭ್ರಮಾತ್ಮಕ ಸಂಸಾರವಿದು

ಕುಮತಿಯು ತರಬಿಡದೈಸೆ

ಮಮತೆಯಿಂದ ಬಾಧಿಪುದೈಸೆ || ೧||

ಅನಾದಿ ವೃಥಾ ಮೂಢಮತಿ

ಜನನ ಮರಣದೊಳು ಕೂಡಿ

ಘನಸುಖ ಕೆಡಿಪುದು ನೋಡೋ ||೨||

ಪರಾತ್ಮಕ ಸಂಸಾರವಹ

ಪರ ಶಿವಯೋಗವನೈದಿ

ಸುರಸ ಸುಖವ ನೀ ಹೊಂದೋ || ೩ ||

Related Posts