ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ -ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ
ಸಹೃದಯ ಓದುಗರಿಗೆ ,
ಪವಿತ್ರ ಸಪ್ಟಂಬರ್ ತಿಂಗಳು ಪರಮಪೂಜ್ಯ ಹಾನಗಲ್ಲ ಕುಮಾರ ಶಿವಯೋಗಿಗಳು ಭುವಿಗೆ ಅವತರಿಸಿ ಬಂದ ವಿಷೇಶ ತಿಂಗಳು.
“ಕತ್ತಲುಂಡ ಸಮಾಜಕ್ಕೆ ಬೆಳಕಾಗಿ ಬಂದ ಶಿವಯೋಗಿಗಳ ಕುರಿತು ಈ ತಿಂಗಳು ಪ್ರಕಟಿಸಿದ ವಿಶೇಷ ಲೇಖನಗಳಲ್ಲಿ ಒಂದಾದ “ಋಣ ವಿಮುಕ್ತರು” ಲೇಖನದ ಈ ಸಾಲುಗಳು ಅತ್ಯಂತ ಅರ್ಥಪೂರ್ಣ.
ವ್ಯಕ್ತಿಯೊಬ್ಬ ಈ ಭೂಮಿಯ ಮೇಲೆ ಹುಟ್ಟುತ್ತಲೇ ಎಷ್ಟೋ ಋಣಗಳನ್ನು ಹೊತ್ತುಕೊಂಡೇ ಹುಟ್ಟಿ ಬರುತ್ತಾನೆ. ಮಾತಾಪಿತರ ಋಣ, ಮಾತೃಭೂಮಿಯ ಋಣ, ಗುರು ಋಣ, ಪರಿವಾರದ ಋಣ, ಅನ್ನದ ಋಣ, ಧರ್ಮದ ಋಣ, ಸಮಸ್ತ ಸಮಾಜದ ಋಣ-ಹೀಗೆ ಋಣದ ಜಾಲವು ಅನಂತವಾಗಿದೆ. ಡಿ.ವಿ.ಜಿ.ಯವರು ಹೇಳುವ-
ಋಣವ ತೀರಿಸಬೇಕು ಋಣವ ತೀರಿಸಬೇಕು
ಋಣವ ತೀರಿಸುತ ಜಗದಾದಿ ಸತ್ವವನು
ಜನದಿ ಕಾಣುತ್ತದರೊಳ್ ಒಂದುಗೂಡಬೇಕು.
ಎಂಬ ಮಾತು ಅತ್ಯಂತ ಗಮನಾರ್ಹವಾಗಿದೆ. ವ್ಯಕ್ತಿ ತಾನು ಹೊತ್ತು ತಂದ ಹಲವು ಹತ್ತು ಋಣಗಳನ್ನು ಹೊತ್ತು ಹೊತ್ತಿಗೆ ತೀರಿಸಿ ಋಣಮುಕ್ತನಾಗ ಬೇಕಾಗುತ್ತದೆ. ಹೀಗೆ ಸಕಾಲಕ್ಕೆ ಸಮಸ್ತ ಋಣಗಳನ್ನು ಅರ್ಥಪೂರ್ಣವಾಗಿ ತೀರಿಸಿ ಋಣವಿಮುಕ್ತರೆನಿಸಿದವರು ಹಾನಗಲ್ಲ ಶ್ರೀ ಗುರು ಕುಮಾರೇಶರು.
ಸಪ್ಟಂಬರ ೨೦೨೨ ಸಂಚಿಕೆಯ ಲೇಖನಗಳ ವಿವರ
- ಕಾವ್ಯ : “ಪರ ಶಿವಯೋಗದ ಸಾರ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
- ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-೧೬ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
- ಹಾನಗಲ್ಲ ಕುಮಾರಸ್ವಾಮಿಗಳು • ಬಿ. ಶಿವಮೂರ್ತಿ ಶಾಸ್ತ್ರಿ
- ಹಾನಗಲ್ಲ ಕುಮಾರ ಶಿವಯೋಗಿಗಳು • ಪಂಡಿತ ನಾಗಭೂಷಣ ಶಾಸ್ತ್ರಿಗಳು.
- ಋಣವಿಮುಕ್ತರು *ಡಾ. ಬಸವರಾಜ ಜಗಜಂಪಿ
- ಹಾನಗಲ್ಲ ಶ್ರೀ ಕುಮಾರ ಸ್ವಾಮಿಗಳೂ ಶಿಕ್ಷಣ ಪ್ರಸಾರವೂ • ಶ್ರೀ ಶಿ. ಫ. ಮರಡೂರ ಧಾರವಾಡ
- ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳೂ ಪ್ರಾಣಿದಯೆಯೂ • ಶ್ರೀ ಆನೆಕೊಂಡದ ಮುಪ್ಪಣ್ಣನವರು, ಡಾವಣಗೆರೆ
- ಕುಮಾರ ಮಹಾಸ್ವಾಮಿಗಳು : ಮಹಿಳೆಯರ ಹಿತಚಿಂತಕರು • ಡಾ. ಗುರುದೇವಿ ಹುಲೆಪ್ಪನವರಮಠ
- ಆಡಿಯೋ ಬುಕ್ : ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು
ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ
ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ
ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು
ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ
ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ
ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾಅವರಿಗೆ ತುಂಬು ಹೃದಯದ ಕೃತಜ್ಞತೆಗಳು
-ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ -ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ