ಸಂಪಾದಕೀಯ :
ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ -ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ
ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,
ಶ್ರೀಕುಮಾರ ತರಂಗಿಣಿ ೨೦೨೩ ನವಂಬರ ಸಂಚಿಕೆಯನ್ನು ಹೊಸರೂಪದಲ್ಲಿ ತಮಗೆ ಅರ್ಪಿಸಲು ಅತ್ಯಂತ ಹರ್ಷವೆನಿಸುತ್ತದೆ.
೨೦೨೧ ಬಸವ ಜಯಂತಿ ಯಂದು ಹಂಪಿಹೇಮಕೂಟ ಶೂನ್ಯಸಿಂಹಾಸನಾಧೀಶ್ವರ ಪೂಜ್ಯಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರು ಅಧ್ಯಕ್ಷರು, ಶ್ರೀ ಮದ್ವೀರಶೈವ ಶಿವಯೊಗ ಮಂದಿರ ಸಂಸ್ಥೆ, ಶಿವಯೋಗ ಮಂದಿರ.ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ-ಬಳ್ಳಾರಿ-ಹಾಲಕೆರೆ ಅವರ ಅಮೃತಹಸ್ತದಿಂದ ಆರಂಭಗೊಂಡ ಶ್ರೀಕುಮಾರ ತರಂಗಿಣಿ ಬ್ಲಾಗ ಇಂದು ಪೂಜ್ಯಶ್ರೀ ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳ ಅಮೃತಹಸ್ತದಿಂದ ಹೊಸ ರೂಪ ದೊಂದಿಗೆ ಅನಾವರಣಗೊಳ್ಳುತ್ತಿದೆ.
ಕನ್ನಡಿಗರ ಜೀವನವನ್ನೇ ತಮ್ಮ ದಿವ್ಯವಾದ ತಪೋತೇಜಸ್ಸಿನಿಂದ ಬೆಳಗಿ ಮುನ್ನಡೆಸಿ ಹೋದ ಕಾರಣಿಕ ಶ್ರೀ ಕುಮಾರಯೋಗಿಯ ಪುಣ್ಯ ಸ್ಮರಣೆಯ ನಮಗೆ ಸ್ಫೂರ್ತಿಯನ್ನು ನೀಡುವುದರಲ್ಲಿ ಸಂದೇಹವಿಲ್ಲ.
ನಿರುತ್ಸಾಹದ ನಿಬ್ಬೆರಗಿನಲ್ಲಿರುವ ಇಂದಿನ ಕನ್ನಡದ ಮಣ್ಣಿಗೆ ಕಾಯಕಯೋಗಿ ಕುಮಾರೇಶ್ವರನ ನೆನಹು ಆಶಾದಾಯಕವಾದ ಹೊಸ ಜೀವರಸವನ್ನು ಕರೆಯುವುದರಲ್ಲಿ ಯಾವ ಅಭ್ಯಂತರವೂ ಇಲ್ಲ.
ಇಂಥ ಮಹಾಮಹಿಮರ ಜೀವನ ಚರಿತ್ರೆಯಿಂದ ನಾವಿಂದು ಬೆಳಕನ್ನು ತುಂಬಿಕೊಳ್ಳಬೇಕಾಗಿದೆ. ಕಾರ್ಯೋತ್ಸಾಹದ ಕಿಡಿಯನ್ನು ಹೊತ್ತಿಸಿಕೊಳ್ಳಬೇಕಾಗಿದೆ. ಅವರಿತ್ತ ಆ ದಿವ್ಯ ಸಂದೇಶವು ಇಂದಿನವರಾದ ನಮಗೆ ಬಾಳಬಟ್ಟೆಯ ಪರಮಾಗಮ ವಾಗಿದೆ.
ಅಂತೆಯೇ ಇಂದು ಶ್ರೀಗಳ ಸವಿನೆನಹು ಭಾರತ ಹುಣ್ಣಿಮೆಯ ಬೆಳದಿಂಗಳಂತೆ ನಮ್ಮ ಬುವಿ ಬಾನುಗಳನ್ನು ತುಂಬಿ ಮೈಮನಗಳನ್ನು ಅರಳಿಸಿ ಚೇತನಕಾರಿಯಾಗಿ ತೂರಿ ಬರುತ್ತದೆ.
2023 ಸಪ್ಟಂಬರ ಮತ್ತು ಅಕ್ಟೊಬರ ತಿಂಗುಳಗಳಲ್ಲಿ ಕರ್ನಾಟಕ,ಮಹಾರಾಷ್ಟ್ರ, ದೆಹಲಿ ಮತ್ತು ತೆಲಂಗಾಣ ರಾಜ್ಯಗಳ ಗಡಿಪ್ರದೇಶಗಳಲ್ಲಿ ನಡೆದ ಶ್ರೀಕುಮಾರೇಶ್ವರರ ೧೫೬ನೆಯ ಜಯಂತಿ ಮಹೋತ್ಸವದ ಚಿತ್ರಸಂಪುಟ “ಶ್ರೀಕುಮಾರೇಶ್ವರ ವೈಭವ”
ಚಿತ್ರಸಂಪುಟದ ಸಂಗ್ರಹಕ್ಕೆ ಸಹಕರಿಸಿದ ಸಮಸ್ತ ಶ್ರೀಕುಮಾರೇಶ್ವರರ ಅಭಿಮಾನಿ ಭಕ್ತರಿಗೆ ತುಂಬುಹೃದಯದ ಕೃತಜ್ಞತೆಗಳು
ಶ್ರೀಕುಮಾರ ತರಂಗಿಣಿ ೨೦೨೩ ನವಂಬರ ಸಂಚಿಕೆಯ ಲೇಖನಗಳ ವಿವರ
- ಕಾವ್ಯ : “ರೇವಣಸಿದ್ಧ ಗುರುದೇವ ಭಾವಜ ಹರಜೀವ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
- ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-೩೦ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
- ವೇದಾಂತಾಭ್ಯಾಸ-ಸಿದ್ಧಾಂತ ಹವ್ಯಾಸ “ಕಾರುಣಿಕ ಕುಮಾರಯೋಗಿ “ ಧಾರವಾಹಿ : ಲೇಖಕರು ಜ.ಚ.ನಿ.
- ನರಜನ್ಮ-ಹರಜನ್ಮ ಲೇಖಕರು :ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೊಂಟದಾರ್ಯಮಠ ಗದಗ
ಶ್ರೀಕುಮಾರ ತರಂಗಿಣಿ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು.
-ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ -ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ