ಶ್ರೀಕಂಠ.ಚೌಕೀಮಠ.
ಸಂಪಾದಕರು.”ಶ್ರೀಕುಮಾರ ತರಂಗಿಣಿ “ ಮಾಸಿಕ ಬ್ಲಾಗ್
ಹಾನಗಲ್ಲ.ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ
ಸಹೃದಯ ಓದುಗರಿಗೆ ,
ಕಳೆದ ತಿಂಗಳು ಪರಮಪೂಜ್ಯ ಹಾನಗಲ್ಲ ಶ್ರೀಕುಮಾರ ಶಿವಯೋಗಿಗಳ ೧೫೭ನೆಯ ಜಯಂತಿ ಮಹೋತ್ಸವ ಕಾರ್ಯಕ್ರಮ ನಾಡಿನಾದ್ಯಂತ,ದೇಶದ ವಿವಿಧ ಭಾಗಗಳಲ್ಲಷ್ಟೆ ಅಲ್ಲ ಚಿಕ್ಯಾಗೋ ಮತ್ತು ಜರ್ಮನಿಯಲ್ಲೂ ಸಡಗರ ಸಂಭ್ರಮ ಗಳಿಂದ ನೆರವೇರಿದವು
ಪರಮಪೂಜ್ಯ ಹಾನಗಲ್ಲ ಶ್ರೀಕುಮಾರ ಶಿವಯೋಗಿಗಳು,ಅವರು ಕೇವಲ ನುಡಿದು ಮರೆಯಾಗಲಿಲ್ಲ.
ನಡೆದು ಬದುಕಿದವರು
ನಡೆಗಳ ಕಾರ್ಯಕ್ಕೆ ತಮ್ಮ ೬೩ ವರ್ಷಗಳ ಸಮಗ್ರ ಬದುಕನ್ನೇ ಸಮಾಜಕ್ಕೇ ಅರ್ಪಿಸಿದ ಮಹಾತ್ಮರು
ಅವರ ಬದುಕು ,ಸಾಧನೆ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳು ಕತ್ತಲು ಕವಿದ ಸಮಾಜಕ್ಕೆ ನೀಡಿದ ಬೆಳಕುಗಳು . ಅವರ ದೂರ ಯೋಚನೆಗಳ “ಯೋಜನೆ” ಗಳು ಶಿವಯೋಗ ಸಂಪನ್ನದ ಅಡಿಪಾಯಗಳಿಂದ ಇಂದು ಹಲವು ಸಂಸ್ಥೆಗಳು ಮತ್ತು ಹಲವಾರು ಶಿಕ್ಷಣ ಸಂಸ್ಥೆಗಳು ,ಸಮಾಜ ಸೇವೆಯಲ್ಲಿ ಅವಿಛಿನ್ನವಾಗಿ ಶತಮಾನಗಳಿಂದ ಮುನ್ನೆಡೆಯುತ್ತಿವೆ.
ಪೂಜ್ಯ ಹಾನಗಲ್ಲ ಶ್ರೀಕುಮಾರ ಶಿವಯೋಗಿಗಳ ಚರಿತ್ರೆಯಲ್ಲಿ ಉಲ್ಲೇಖವಾಗಿರುವ ಅವರ ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿಗಳ ಜೊತೆಗೆ ಅವರು ಯಶಸ್ವಿಯಾಗಿ ನಿರ್ವಹಿಸಿದ ಸಾಮಾಜಿಕ ಮತ್ತು ಧಾರ್ಮಿಕ ಯೋಜನೆಗಳು ೧೨೦ ವರ್ಷ ಗಳ ನಂತರವೂ ಅವ್ಯಾಹತವಾಗಿ ಮುಂದುವರೆದುಕೊಂಡು ಬರುತ್ತಿರುವದು ಪೂಜ್ಯರ ಅರ್ಥಪೂರ್ಣ ಯೋಚನೆ ಮತ್ತು ದೃಡ ಯೋಜನೆಗಳಿಗೆ ಸಾಕ್ಷಿಯಾಗಿ ನಿಲ್ಲುತ್ತವೆ
ಶ್ರೀಕುಮಾರ ತರಂಗಿಣಿ ಅಕ್ಟೋಬರ ೨೦೨೪ ಸಂಚಿಕೆಯ ಲೇಖನಗಳ ವಿವರ
- ಕಾವ್ಯ : “ಮಾನವಾ ! ನೀನಾರೋ |” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
- ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-೩೯ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
- ಕಾರುಣಿಕ ಕುಮಾರಯೋಗಿ ಧಾರವಾಹಿ: ಸ್ತ್ರೀಸುಧಾರಣೆ -ಲೇಖಕರು-ಜ.ಚ.ನಿ
- ಸತಿ-ಪತಿ: ಲೇಖಕರು: ಪೂಜ್ಯ ಜಗದ್ಗುರು ಡಾ|| ಸಿದ್ಧರಾಮ ಮಹಾಸ್ವಾಮಿಗಳು. ಜಗದ್ಗುರು ತೊಂಟದಾರ್ಯ ಸಂಸ್ಥಾನಮಠ ಗದಗ
- ಕಾವ್ಯ: ಪರಮೇಶ್ವರಿಯ ಪುಣ್ಯನಾಮವನು ರಚನೆ:ಪೂಜ್ಯ ನಿಜಗುಣ ಶಿವಯೋಗಿಗಳು
- ತ್ರಿವಿಧ ಜಂಗಮತ್ವದ ನಿಲವಿಗೇರಿ ಮೆರೆದ ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು:ಲೇಖಕ: ಶ್ರೀಕಂಠ.ಚೌಕೀಮಠ.
-ಶ್ರೀಕಂಠ.ಚೌಕೀಮಠ.
ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ